ದಾಂಡೇಲಿ : ನಗರದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯ್ತು. ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರೋಹಿಣಿ.ಡಿ.ಬಸಾಪುರ ಅವರು ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಆಧ್ಯ ಕರ್ತವ್ಯ. ಪರಿಸರ ಕೇವಲ ಹಸಿರು ಮಾತ್ರವಲ್ಲ ನಮ್ಮ ಉಸಿರು ಕೂಡ ಆಗಿದೆ ಎನ್ನುವುದನ್ನು ನಾವೆಲ್ಲರೂ ಅರಿತು ನಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್, ವಕೀಲರ ಸಂಘದ ಅಧ್ಯಕ್ಷ ವಿ.ಆರ್.ಹೆಗಡೆ, ವಲಯಾರಣ್ಯಾಧಿಕಾರಿ ಅಪ್ಪರಾವ್ ಕಲಶೆಟ್ಟಿ, ಉಪ ವಲಯಾರಣ್ಯಾಧಿಕಾರಿ ಸಂದೀಪ ನಾಯ್ಕ, ವಕೀಲರ ಸಂಘದ ಕಾರ್ಯದರ್ಶಿ ವಿಶ್ವನಾಥ ಲಕ್ಷ್ಯಟ್ಟಿ ಹಾಗೂ ವಕೀಲರುಗಳು, ಸಿವಿಲ್ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.