ಚಿಕ್ಕಮಗಳೂರು: ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಕಳಪೆ ಕಾಮಗಾರಿಯ ದರ್ಶನವಾಗಿದೆ. ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರ ಕೊಟ್ಟಿಗೆಹಾರ ಬಳಿ ರಸ್ತೆಯ ಪಕ್ಕದಲ್ಲಿ ಹಾಕಲಾಗಿದ್ದ ತಡೆಗೋಡೆ ಕುಸಿದುಬಿದ್ದಿದೆ. ಜೊತೆಗೆ ಹೆದ್ದಾರಿಯ ಮಧ್ಯೆ ಬಿದ್ದ ಹೊಂಡದಿಂದ ವಾಹನ ಸವಾರರು ಪರದಾಡುವಂತಾಗಿದೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೇ ಕೋಟಿಗಟ್ಟಲೇ ಹಣ ಸುರಿದು ರಸ್ತೆ ಅಗಲೀಕರಣ ಮಾಡಲಾಗಿತ್ತು.
ಚಾರ್ಮಾಡಿ ಘಾಟ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ಕಳಪೆ ಕಾಮಗಾರಿ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮಳೆ ಬಂದಿದ್ದರಿಂದ ಗುತ್ತಿಗೆ ಪಡೆದ ಸಂಸ್ಥೆಯ ಕರ್ಮಕಾಂಡ ಅನಾವರಣಗೊಂಡಿದೆ.