ಬೆಂಗಳೂರು: ಸ್ವಾತಂತ್ರ‍್ಯೋತ್ಸವದ ಅಮೃತಮಹೋತ್ಸವ ಅಂಗವಾಗಿ ಆಗಸ್ಟ್ 11 ರಿಂದ 17 ವರೆಗೆ ರಾಜ್ಯದ ಎಲ್ಲ ಶಾಲಾ, ಕಾಲೇಜು, ಮದರಸಾಗಳ ಮೇಲೆ ರಾಷ್ಟ್ರ ಧ್ವಜವನ್ನು ಕಡ್ಡಾಯವಾಗಿ ಹಾರಿಸಬೇಕೆಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಕಾಲೇಜು, ಮದರಸಾಗಳಿಗೂ ಈ ನಿಯಮ ಅನ್ವಯಸುತ್ತದೆ. ಮದರಸಾಗಳು ಯವುದೇ ಕುಂಟು ನೆಪ ಹೇಳದೇ ಆರು ದಿನ ರಾಷ್ಟ ಧ್ವಜವನ್ನು ಹಾರಿಸಬೇಕೆಂದು ಇಲಾಖೆ ತಿಳಿಸಿದೆ.
ಜೊತೆಗೆ ಸರ್ಕಾರದ ಸೌಲಭ್ಯ ಪಡೆಯುವ ಎಲ್ಲಾ ಶಿಕ್ಷಣ ಸಿಬ್ಬಂದಿಗಳು ತಮ್ಮ ಮನೆಯ ಮೇಲೆ ತಪ್ಪದೇ ರಾಷ್ಟ್ರ ಧ್ವಜ ಹಾರಿಸಬೇಕು. ಶಾಲಾ, ಕಾಲೇಜು, ಮದರಸಾಗಳಲ್ಲಿ ರಾಷ್ಟಭಕ್ತಿ ಮೂಡಿಸುವ ಗಾಯನ, ಪ್ರಬಂಧ, ಕ್ವಿಜ್ ಮತ್ತು ಸ್ವಾತಂತ್ರ‍್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ನಡೆಸಬೇಕೆಂದು ಆದೇಶದಲ್ಲಿ ಸೂಚಿಸಿದೆ.