ಡೋಮಗೇರ ಬಳಿ ಟ್ಯಾಂಕರ್ ಪಲ್ಟಿ: ಚಾಲಕ, ನಿರ್ವಾಹಕ ಪ್ರಾಣಾಪಾಯದಿಂದ ಪಾರು

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿಯೊಂದು ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 63 ರ ಡೋಮಗೇರೆ ಕ್ರಾಸ್ ಬಳಿ ನಡೆದಿದೆ.

ಮಂಗೂರಿನಿಂದ ಮುಂಬೈಗೆ ಹೊರಟಿದ್ದ ಟ್ಯಾಂಕರ್ ಡೊಮಗೇರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದಿದೆ. ಘಟನೆಯಲ್ಲಿ ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಇದ್ದುದರಿಂದ ಕೂಡಲೇ ಕ್ರೇನ್ ಸಹಾಯದಿಂದ ಲಾರಿಯನ್ನು ಎತ್ತಿ ಪೊಲೀಸರು ಸಂಚಾರ ಸುಗಮಗೊಳಿಸಿದರು.