300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ.

300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೊರೆದಿದ್ದ 300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದೆ. ಸದ್ಯ 20 ಅಡಿ ಆಳದಲ್ಲಿ ಮಗು ಸಿಲುಕಿದೆ, ರಕ್ಷಣಾ ಕಾರ್ಯ ಮುಂದುವರೆದಿದೆ.

ಆಕೆಯನ್ನು ಸುರಕ್ಷಿತವಾಗಿ ಹೊರತರಲು ಜೆಸಿಬಿ ಹಾಗೂ ಪೊಕ್ಲಾನ್ ಯಂತ್ರದ ಸಹಾಯದಿಂದ ಅಗೆಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ. ಮನೆಯ ಸಮೀಪವಿರುವ ಹೊಲದಲ್ಲಿ ಆಟವಾಡುತ್ತಿದ್ದಾಗ ಬೋರ್‌ವೆಲ್‌ನ ತೆರೆದ ಗುಂಡಿಗೆ ಬಿದ್ದಿದ್ದಾಳೆ.

ಸ್ಥಳದಲ್ಲಿಯೇ ಆಡಳಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜೆಸಿಬಿ ಹಾಗೂ ಪೊಕ್ಲಾನ ಯಂತ್ರದ ಸಹಾಯದಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಸಮಾನಾಂತರ ಹೊಂಡಗಳನ್ನು ತೋಡಿ, ಬಾಲಕಿಯ ಚಲನವಲನಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳ ಸಹಾಯವನ್ನು ತೆಗೆದುಕೊಂಡು ಆಮ್ಲಜನಕವನ್ನು ಸಹ ಸರಬರಾಜು ಮಾಡಲಾಗುತ್ತಿದೆ.