ಸಿದ್ದಾಪುರ : ತಾಲೂಕಿನ ಬಿಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಂಜು ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೊಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನದ ಅಡಿಯಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ ಸಹಯೋಗದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಗ್ರಾಮ ಆರೋಗ್ಯ ಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಹೊಸಮಂಜು ಗ್ರಾಮದ ಸದಸ್ಯ ರಾಜು ನಾಯ್ಕ ಮತ್ತು ಸುವರ್ಣ ನಾಯ್ಕ ಅವರು ಉದ್ಘಾಟಿಸಿದರು.
ಗ್ರಾಮೀಣ ಭಾಗದ ಜನರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನರೇಗಾ ಯೋಜನೆಯಡಿ ನಿರಂತರ ಕೆಲಸ ಒದಗಿಸುವುದರ ಜೊತೆಗೆ ಕೂಲಿಕಾರರ ಆರೋಗ್ಯ ತಾಪಸಣೆಗೆ ಮುಂದಾಗಿದ್ದು, ಪ್ರಾಥಮಿಕ ಹಂತದಲ್ಲಿ ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಮಧುಮೇಹ, ರಕ್ತಹೀನತೆ, ಕ್ಯಾನ್ಸರ್ ಮತು ಮಾನಸಿಕ ಕಾಯಿಲೆಗಳನ್ನು ತಡೆಗಟ್ಟುವುದು ಹಾಗೂ ಪ್ರತಿ ಸಮುದಾಯದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆಯನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದ್ದು ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತಾಗಲಿ ಎಂದು ಕಾರ್ಯಕ್ರಮ ಉದ್ದೇಶಿಸಿ ತಾಲ್ಲುಕು ಸಂಯೋಜಕ ರಮೇಶ ನಾಯ್ಕ ರವರು ಮಾತನಾಡಿದರು.
ಕಾಮಗಾರಿ ಸ್ಥಳದಲ್ಲಿದ್ದ 100 ಕ್ಕೂ ಅಧಿಕ ನರೇಗಾ ಕೂಲಿ ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ ಮತ್ತು ರಕ್ತಹೀನತೆ ಕಾಯಿಲೆ ಕುರಿತು ಆರೋಗ್ಯ ತಪಾಸಣೆ ನಡೆಸಲಾಯಿತು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿ ಡಿ ಒ ನಾಗೇಶ ಹೆಚ್ ಪಿ, ಸಮುದಾಯ ಆರೋಗ್ಯ ಅಧಿಕಾರಿ ಅನುರಾಧ ಮತ್ತು ರಮೇಶ್ ನಾಯ್ಕ ದೊಡ್ಡೇರಿ ಹಾಗು ಪಂಚಾಯತ ಸಿಬ್ಬಂದಿಯವರು ಉಪಸ್ಥಿತರಿದ್ದರು.