ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಯುವಕನಿಗೆ 20 ವರ್ಷ ಜೈಲು, 1 ಲಕ್ಷದ 10 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಶಿವಮೊಗ್ಗ  ಜಿಲ್ಲಾ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷದ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

2020ರಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ 21 ವರ್ಷದ ಯುವಕನೋರ್ವ 17 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆಯೊಂದಿಗೆ 1 ಲಕ್ಷದ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.