ರಾಷ್ಟ್ರ ರಾಜಧಾನಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನ ರಷ್ಯಾದಲ್ಲಿ ಲ್ಯಾಂಡಿಂಗ್ ಆಗಿದೆ. ಇದೀಗ ರಷ್ಯಾದಲ್ಲಿರುವ ಭಾರತೀಯರನ್ನು ಮತ್ತೆ ಭಾರತಕ್ಕೆ ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ದೆಹಲಿ: ರಾಷ್ಟ್ರ ರಾಜಧಾನಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ರಷ್ಯಾದ ಮಗದನ್‌ಗೆ ತಿರುಗಿಸಲಾಗಿತ್ತು. ರಷ್ಯಾದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ರಷ್ಯಾದಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಯಾಣಿಕರನ್ನು ಬುಧವಾರ ಮುಂಬೈನಿಂದ ಮೀಸಲು ವಿಮಾನವೊಂದು ಕರೆತರಲಿದೆ ಎಂದು ಏರ್ ಇಂಡಿಯಾ ಇಂದು (ಜೂ. 7) ತಿಳಿಸಿದೆ.