ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ಎಎಸ್ಎಂ ಕಾಲೇಜು ಪ್ರಾಂಶುಪಾಲ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಬಗ್ಗೆ ಉಪನ್ಯಾಸಕಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಉಪನ್ಯಾಸಕಿಯೊಬ್ಬರಿಗೆ ಕಾಲೇಜು ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ಎಎಸ್ಎಂ ಕಾಲೇಜು ಪ್ರಾಂಶುಪಾಲ ಶರಣಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಎಎಸ್ಎಂ ಕಾಲೇಜು ಉಪನ್ಯಾಸಕಿ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 59 ವರ್ಷ ವಯಸ್ಸಿನ ಪ್ರಾಚಾರ್ಯ ಶರಣಪ್ಪಅವರು ಕಳೆದ 6 ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಮೈ ಕೈ ಮುಟ್ಟುವುದು. ಅಸಭ್ಯವಾಗಿ ಮಾತನಾಡುವುದು. ಅಸಭ್ಯವಾಗಿ ವರ್ತನೆ ಮಾಡಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಉಪನ್ಯಾಸಕಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮತ್ತೊಂದೆಡೆ ಗುಲಬರ್ಗ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕ, ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವುದು ಆಡಿಯೋದಲ್ಲಿದೆ. ಈ ಆಡಿಯೋ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕನದ್ದು ಎನ್ನಲಾಗಿದ್ದು,ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿ ಜೊತೆ ಒಟ್ಟು 23 ನಿಮಿಷ ಮಾತನಾಡಿರುವ ಈ ಆಡಿಯೋ ವಿಶ್ವವಿದ್ಯಾಯಲದ ಕ್ಯಾಂಪಸ್ನಲ್ಲಿ ಕಂಪನ ಸೃಷ್ಟಿಸಿದೆ.