ಹಳಿಯಾಳ: ಉಚಿತ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಹಳಿಯಾಳ : ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ 18 ರಿಂದ 45 ವರ್ಷ ವಯಸ್ಸಿನ ಯುವಕರಿಗೆ ಊಟ ವಸತಿ ಸಹಿತ ಉಚಿತ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಯನ್ನು ಆಯೋಜಿಸಲಾಗುತ್ತಿದ್ದು, ಈ ತರಬೇತಿಯಲ್ಲಿ ಭಾಗವಹಿಸಲಿಚ್ಚಿಸುವವರು ಇದೇ ಬರುವ ಜೂನ್:30 ರೊಳಗೆ ತಮ್ಮ ಹೆಸರನ್ನು ನೊಂದಾಯಿಸುವಂತೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಇಂದು ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ಹಳಿಯಾಳ ಪಟ್ಟಣದ ದಾಂಡೇಲಿ ರಸ್ತೆಯಲ್ಲಿರುವ ಉದ್ಯೋಗ ವಿದ್ಯಾನಗರದಲ್ಲಿರುವ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ಹೆಸರನ್ನು ನೊಂದಾಯಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9483485489, 9482188780 08284-220807 ಗೆ ಸಂಪರ್ಕಿಸುವಂತೆಯೂ ಇಲ್ಲವೇ ವಾಟ್ಸಪ್ ಸಂಖ್ಯೆ: 9632225123 ಗೆ ವಾಟ್ಸಪ್ ಮೂಲಕ ಹೆಸರನ್ನು ನೊಂದಾಯಿಸುವಂತೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.