ಈ ವರ್ಷವೇ ಪಠ್ಯ ಪರಿಷ್ಕರಣೆ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಒಂದೆಡೆ ಶಾಲಾ ಪಠ್ಯ ಪರಿಷ್ಕರಣೆ ಫೈಟ್ ಜೋರಾಗಿದ್ರೆ ಮತ್ತೊಂದಡೆ ಪಠ್ಯ ಪರಿಷ್ಕರಣೆಯಿಂದ ಸಾಹಿತಿ ಬರಗೂರು ರಾಮಚಂದ್ರಪ್ಪ ಹಿಂದೆ ಸರಿದಿದ್ದಾರೆ. ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷತೆಗೆ ಬರಗೂರು ತಿರಸ್ಕಾರ ಮಾಡಿದ್ದು, ನಾನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನಾಗಿಲ್ಲ ಎಂದಿದ್ದಾರೆ. ಆದರೂ ಈ ವರ್ಷವೇ ಪಠ್ಯ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಈ ವರ್ಷವೇ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗುತ್ತೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ. ಈ ಕ್ಷಣದಲ್ಲೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧಿಸಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ ಎಂದು ಮಾಹಿತಿ ನೀಡಿದರು.