ದಾಂಡೇಲಿ : ದಾಂಡೇಲಿಯಲ್ಲಿ ವೈರಲ್ ಆಗುತ್ತಿರುವ ಸೋಮಾನಿ ವೃತ್ತದ ಹತ್ತಿರ ಅಪಘಾತವಾದ ದೃಶ್ಯ

ದಾಂಡೇಲಿ : ನಗರದ ಸೋಮಾನಿ ವೃತ್ತದ ಹತ್ತಿರ ಮೊನ್ನೆ ನಡೆದ ದ್ವಿಚಕ್ರ ವಾಹನ ಅಪಘಾತವಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗತೊಡಗಿದೆ.

ಜೆ.ಎನ್.ರಸ್ತೆಯಲ್ಲಿ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಸೋಮಾನಿ ವೃತ್ತಕ್ಕೆ ಡಿಕ್ಕಿಯಾಗಿ, ದ್ವಿಚಕ್ರ ವಾಹನದಲ್ಲಿದ್ದ ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿತ್ತು. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವಾಹನ ಸವಾರರಿಗೆ ಎಚ್ಚರಿಕೆಯ ಘಂಟೆಯಾಗಿದೆ.