ಹಳಿಯಾಳ :ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕಾ ತರಬೇತಿಗೆ ಅರ್ಜಿ ಅಹ್ವಾನ

ಹಳಿಯಾಳ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಆಶ್ರಯದಲ್ಲಿ ಸಧ್ಯದಲ್ಲೆ ಊಟ, ವಸತಿ ಸಹಿತ ಉಚಿತವಾಗಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತರು ಈ ಕೂಡಲೆ ಅರ್ಜಿ ಸಲ್ಲಿಸುವಂತೆ ಇಲ್ಲವೇ ಸಂಸ್ಥೆಯನ್ನು ಸಂಪರ್ಕಿಸುವಂತೆ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು 10 ದಿನಗಳವರೆಗೆ ಈ ತರಬೇತಿ ನಡೆಯಲಿದೆ. ಅನುಭವಿ ಮತ್ತು ನುರಿತ ತರಬೇತುದಾರರಿಂದ ಈ ತರಬೇತಿ ನಡೆಯಲಿದ್ದು, ಊಟ, ವಸತಿಯೊಂದಿಗೆ ತರಬೇತಿಯೂ ಸಂಪೂರ್ಣ ಉಚಿತವಾಗಿರುತ್ತದೆ. ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತರಿರುವ 18 ರಿಂದ 45 ವರ್ಷ ವಯಸ್ಸಿನ ಮಹಿಳೆಯರು, ಪುರುಷರು ತಮ್ಮ ಹೆಸರನ್ನು ವಿಳಾಸ ಸಹಿತ ನೊಂದಾಯಿಸಿಕೊಳ್ಳುವಂತೆಯು ಹಾಗೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 08284- 220807, ಅಥವಾ ಮೊಬೈಲ್ ಸಂಖ್ಯೆ : 9482188780, ಇಲ್ಲವೇ 9742438790 ಸಂಖ್ಯೆಗೆ ಸಂಪರ್ಕಿಸುವಂತೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.