ದಾಂಡೇಲಿ :ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ದಾಂಡೇಲಿ : ನಗರ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಯ್ತು.

ಕಾರ್ಯಕ್ರಮವನ್ನು ನಗರದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರೋಹಿಣಿ.ಡಿ.ಬಸಾಪುರ ಅವರು ಇಂದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಾಗುತ್ತಿದೆ. ಶಿಕ್ಷಣವೇ ಎಲ್ಲದಕ್ಕೂ ಪ್ರಧಾನ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸತತ ಪರಿಶ್ರಮಿಗಳಾಗುವುದರ ಜೊತೆಯಲ್ಲಿ ಸತತ ಅಧ್ಯಯನಶೀಲರಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟು ಇಷ್ಟದಿಂದ ಕಲಿತರೆ ಮುಂದಿನ ದಿನಗಳಲ್ಲಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಹೇಳಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಫಾದರ್ ಸಂತೋಷ್ ನೋರೊನ್ಹಾ ಅವರು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಯಿನಿ ಸಿಸ್ಟರ್ ಸೆಲ್ವಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಾದ ಅವೇಸ್ ಮುಜಾವರ್, ಸಿಮ್ರಾನ್ ಅಬ್ದುಲ್ ರಝಾಕ್ ಜಾತಿಗೇರ್, ವೈಭವ್ ಪ್ರೇಮಾನಂದ ಗಾಂವಕರ್, ಕೋಮಲ್, ದ್ವೀತಿ ದೀಪಕ್ ನಾಯಕ, ಜುಬೇರಿಯಾ ಅಲ್ಲಭಕ್ಷು ತಾಳಿಕೋಟಿ, ಸಾಕ್ಷಿ ಸುಭಾಷ್ ನಾಯ್ಕ, ಪ್ರಜ್ವಲ್ ಶ್ರೀಕೃಷ್ಣ ನಾಯ್ಕ ಮೊದಲಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯ್ತು.

ಶಿಕ್ಷಕಿ ಶಿರಿನ್ ಅವರು ಸ್ವಾಗತಿಸಿದರು. ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಗುರು ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೈನಾ ಬೋರ್ಜಿಸ್ ವಂದಿಸಿದರು.