ಡೇಟಿಂಗ್ ಆ್ಯಪ್ ಮೂಲಕ ಯುವತಿಗೆ ವಂಚಿಸಿದ್ದ ಆರೋಪಿ ಬಂಧನ

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಯುವತಿಗೆ ವಂಚಿಸಿದ್ದ ಆರೋಪಿ ಮುದಾಸಿರ್ ಎಂಬಾತನನ್ನು ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಯುವಕನ ಹೆಸರಲ್ಲಿ ಆರೋಪಿ ಮುದಾಸಿರ್ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಆ್ಯಪ್​​ನಲ್ಲಿ ಸಂಗಾತಿ ಹುಡುಕುತ್ತಿದ್ದ ಯುವತಿಗೆ ಮೆಸೇಜ್​​ ಕಳಿಸಿದ್ದ. ಬಳಿಕ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದನು. ದೈಹಿಕ ಸಂಪರ್ಕ ಕೂಡ ಬೆಳೆಸಿದ್ದ ಆರೋಪಿ ಮುದಾಸಿರ್, ನಂತರ ಯುವತಿ ಭೇಟಿ ವೇಳೆ ಆತ​ ಹಿಂದೂ ಅಲ್ಲ ಎಂಬುದು ಬೆಳಕಿಗೆ ಬಂದಿದೆ. ಜೊತೆಗೆ ​ತಾಯಿಗೆ ಹುಷಾರಿಲ್ಲವೆಂದು ಯುವತಿ ಬಳಿ 1 ಲಕ್ಷ ಹಣವನ್ನ ಪಡೆದಿದ್ದನಂತೆ. ಬಳಿಕ ತಾಯಿ ಮೃತಪಟ್ಟಿದ್ದಾರೆ ಎಂದು ಸುಳ್ಳಿನ ಕಥೆ ಕಟ್ಟಿದ್ದಾನೆ.

ಇನ್ನು ಕೊನೆಗೆ ಸೋದರನನ್ನ ನೋಡಲು ದುಬೈಗೆ ಹೋಗಿ ಬರುತ್ತೆನೆಂದು ಫೋನ್ ಸ್ಪಿಚ್ ಆಫ್ ಮಾಡಿ, ಬಳಿಕ ಮುದಾಸಿರ್​ನನ್ನ ಪತ್ತೆ ಹಚ್ಚಿದ ಯುವತಿಗೆ ಡಬ್ಬಲ್ ಡಬ್ಬಲ್ ಶಾಕ್ ಎದುರಾಗಿತ್ತು. ಹೌದು ಅನಿರುದ್ದ್​ ಹೆಸರಿನವನು ಅನಿರುದ್ದ್ ಅಲ್ಲ ಮುದಾಸಿರ್ ಅನ್ನೋದರ ಜೊತೆಗೆ ಮುದಾಸಿರ್​ಗೆ ಮತ್ತೊಂದು ಮದುವೆಯಾಗಿ ಹೆಂಡತಿ ಮಕ್ಕಳು ಇದ್ದಾರೆಂಬುದು ಗೊತ್ತಾಗಿದೆ. ಕೊನೆಗೆ ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರು ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿ ಇದೀಗ ಜೈಲಿಗಟ್ಟಿದ್ದಾರೆ.