ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.
ಸಾಮಾನ್ಯವಾಗಿ ಅವರು ಇರುವಂತೆಯೇ ಬಿಳಿ ಬಣ್ಣದ ಪಂಚೆ, ಶರ್ಟ್, ಶಲ್ಯ ಧರಿಸಿ ರಾಜ್ಯಸಭೆಗೆ ಬಂದಿದ್ದು ವಿಶೇಷವಾಗಿತ್ತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ನಮಸ್ಕರಿಸಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ, ಸಹಿ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಿದರು.
ಕ್ರಿಯಾಶೀಲ, ಸಮಾಜಮುಖಿ, ಅನುಭವಿ ಹಾಗೂ ಸಹೃದಯೀ ವ್ಯಕ್ತಿ ರಾಜ್ಯಸಭೆಯ ಸದಸ್ಯರಾಗಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ ಎಂದು ಹಲವರು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ ಡಾ.ವೀರೇಂದ್ರ ಹೆಗ್ಗಡೆ ಅವರ ಜ್ಞಾನ, ಅನುಭವ ಅಪಾರವಾದುದು.