ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

ಲಕ್ನೋ: ಪತ್ನಿಯೊಂದಿಗೆ ಜಗಳವಾಡಿ ಕೋಪಗೊಂಡಿದ್ದ ವ್ಯಕ್ತಿ ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಅಶ್ಲೀಲ ಫೋಟೋದೊಂದಿಗೆ ಆಕೆಯ ನಂಬರ್ ಅನ್ನು ಬರೆದು ಬೀದಿಗಳಲ್ಲಿ ಪೋಸ್ಟರ್ ಹಚ್ಚಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಆಗ್ರಾದ ವ್ಯಕ್ತಿ ತನ್ನದೇ ಪತ್ನಿಯ ಅಶ್ಲೀಲ ಫೋಟೋ ಇರುವ ಪೋಸ್ಟರ್‌ಗಳನ್ನು ಬೀದಿಗಳಲ್ಲಿ ಹಚ್ಚಿರುವ ವೀಡಿಯೋ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಕಳೆದ 6 ವರ್ಷಗಳಿಂದ ಪತಿ ಹಾಗೂ ಪತ್ನಿ ಜಗಳವಾಡುತ್ತಿದ್ದು, ವ್ಯಕ್ತಿ ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಇಂತಹ ಕೃತ್ಯ ಮಾಡಿದ್ದಾನೆ ಎಂದು ವರದಿಗಳು ತಿಳಿಸಿವೆ. 

ಘಟನೆ ಬಗ್ಗೆ ಮಹಿಳೆ ತನ್ನ ಪತಿಯ ವಿರುದ್ಧ ಕಮಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಾತ್ರವಲ್ಲದೇ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯನ್ನು ಹಾಕಿದ್ದಾಳೆ.