ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಬಹುದು. ಈ ಮಧ್ಯೆ ಖಾಸಗಿ ಬಸ್ ಗಳಲ್ಲಿಯೂ ಫ್ರೀ ಬಸ್ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದ್ದು, ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಇಂದು ಅಧಿಕೃತವಾಗಿ 11 ಗಂಟೆಗೆ ಮಹಿಳೆಯ ಉಚಿತ ಪ್ರಯಾಣಕ್ಕೆ ಚಾಲನೆ ಸಿಗಲಿದೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾರ್ಯಗತ ಮಾಡುತ್ತಿದ್ದೇವೆ. ಪ್ರತಿಪಕ್ಷಗಳು ಟೀಕೆ ಮಾಡುತ್ತಿದ್ದವು. ಈಗ ನಾವು ಜಾರಿ ಮಾಡುತ್ತಿದ್ದೇವೆ. ಈ ಹಿಂದೆ ಭರವಸೆಗಳನ್ನು ಕೊಟ್ಟಿದ್ರು. ಅದರಲ್ಲಿ ಜಾರಿ ಮಾಡಿದ್ದು ಕೆಲವು ಮಾತ್ರ ಎಂದು ವಾಗ್ದಾಳಿ ನಡೆಸಿದರು.
ಎಲ್ಲಾ ಗ್ಯಾರಂಟಿ ಕಾರ್ಯಕ್ರಮಗಳು ಯಶಸ್ವಿಯಾಗಿ ಆಗುತ್ತೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಆಯಾ ಶಾಸಕರು, ಸಂಸದರ ಸಮ್ಮುಖದಲ್ಲಿ ಏಕಾಕಲದಲ್ಲಿ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಿಂದ ಮೆಜೆಸ್ಟಿಕ್ಗೆ ಬರುತ್ತಾರೆ. ಸ್ಮಾರ್ಟ್ ಕಾರ್ಡ್ ಆದಷ್ಟು ಬೇಗ ನೀಡುವ ಕೆಲಸ ಆಗುತ್ತೆ. ಸೇವಾ ಸಿಂಧು ಪೋರ್ಟಲ್ ಸರ್ವರ್ ಸ್ಲೋ ಆದ್ರೆ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತೆ ಎಂದು ಸಚಿವರು ತಿಳಿಸಿದರು.