ಬಿಪರ್ಜೋಯ್ ಚಂಡಮಾರುತ ಎಫೆಕ್ಟ್ – ಹಾಸನದಲ್ಲಿ ಧಾರಾಕಾರ ಮಳೆ

ಹಾಸನ: ಬಿಪರ್ಜೋಯ್ ಚಂಡುಮಾರುತದ ಪರಿಣಾಮದಿಂದಾಗಿ ಹಾಸನ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಭಾನುವಾರ ಬೆಳಗ್ಗೆಯಿಂದ ಆರಂಭವಾದ ಗಾಳಿ ಸಹಿತ ಮಳೆ ಮುಂದುವರಿಯುತ್ತಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ಭಾರೀ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೇ ಜಿಲ್ಲೆಯ ಕೆಲವೆಡೆ ತುಂತುರು ಮಳೆಯಾಗುತ್ತಿದೆ

ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿತ್ತು. ಬಿತ್ತನೆ ಮಾಡಿದ್ದ ಬೆಳೆಗಳು ಮಳೆಯಿಲ್ಲದೆ ಒಣಗುತ್ತಿದ್ದವು. ಈಗ ಮುಂಗಾರು ಪ್ರವೇಶದಿಂದ ಕೃಷಿ ಚಟುವಟಿಕೆಗಳಿಗೆ ಮರಳಿ ಚಾಲನೆ ದೊರೆತಿದೆ.