ದಾಂಡೇಲಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಸಾರಿಗೆ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ದಾಂಡೇಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಭಾನುವಾರ ಶಾಸಕರಾದ ಆರ್.ವಿ.ದೇಶಪಾಂಡೆಯವರು ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ. ದೇಶಪಾಂಡೆಯವರು ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆಯ ಸಮಯದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಪಡಿಸಲಿದೆ. ಶಕ್ತಿ ಯೋಜನೆಯ ಲಾಭವನ್ನು ಮಹಿಳೆಯರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಾರಿಗೆ ಘಟಕದ ವ್ಯವಸ್ಥಾಪಕರು, ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.