ಧರ್ಮಸ್ಥಳಕ್ಕೆ ಹೊರಟ ಬಸ್​ನಲ್ಲಿ ಉಚಿತ ಟಿಕೆಟ್​ ವಿತರಿಸಿ ಮಹಿಳೆಯರಿಗೆ ಹ್ಯಾಪಿ ಜರ್ನಿ ಎಂದ ಸಿದ್ದರಾಮಯ್ಯ

ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಬಳಿಕ ಸಿದ್ದರಾಮಯ್ಯ ಅವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೇಟ್ ವಿತರಿಸಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

ವಿಧಾನಸಭೆ ಮುಂಭಾಗದಲ್ಲಿ ನಡೆದ ಶಕ್ತಿ ಯೋಜನೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಮಹಿಳೆಯ ಫ್ರೀ ಪ್ರಯಾಣದ ಸ್ಮಾರ್ಟ್ ಕಾರ್ಡ್ ಮಾದರಿ ಬಿಡುಗಡೆ ಮಾಡಿದರು.

ಕಾರ್ಯಕ್ರಮದ ವೇಳೆ ಸಾಂಕೇತಿಕವಾಗಿ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಸ್ಮಾರ್ಟ್ ಕಾರ್ಡ್ ವಿತರಿಸಿದರು.

ವಿಧಾನಸಭೆ ಮುಂದೆ ಶಕ್ತಿ ಯೋಜನೆಗೆ ಚಾಲನೆ ಕೊಟ್ಟ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಿದರು

ಧರ್ಮಸ್ಥಳಕ್ಕೆ ಹೊರಡುವ ಮೊದಲ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡುವ ಮೂಲಕ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.

ಬಳಿಕ ಮೆಜೆಸ್ಟಿಕ್​ನಿಂದ ಹೊರಟ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಮತ್ತು ಸಾರಿಗೆ ಸಚಿವರು ಹಸಿರು ನಿಶಾನೆ ತೋರಿದರು.