ಭಟ್ಕಳ: ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಜಾರಿಯಾಗಿರುವ ಮೊದಲ ಯೋಜನೆ ಇದಾಗಿದೆ. ರಾಜ್ಯಾದ್ಯಂತ ಏಕಕಾಲಕ್ಕೆ ಶಕ್ತಿ ಯೋಜನೆ ಉದ್ಘಾಟನೆಗೊಂಡಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಾಸಕರು ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಡಿವೈಎಸ್ಪಿ ಶ್ರೀಕಾಂತ ಕೆ. ಕ್ರಾಂಗ್ರೆಸ್ ಮುಖಂಡರು ,ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು