ವರುಣ್, ಲಾವಣ್ಯ ನಿಶ್ಚಿತಾರ್ಥದಲ್ಲಿ ನಿಹಾರಿಕಾ ಪತಿ ಗೈರು- ಡಿವೋರ್ಸ್ ಸುದ್ದಿಗೆ ಸಿಕ್ತು ಸಾಕ್ಷಿ

ಮೆಗಾಸ್ಟಾರ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಜೂನ್ 9ಕ್ಕೆ ವರುಣ್ ತೇಜ್- ಲಾವಣ್ಯ ಎಂಗೇಜ್‌ಮೆಂಟ್ ಅದ್ದೂರಿಯಾಗಿ ನಡೆಯಿತು. ಕುಟುಂಬಸ್ಥರು, ಆಪ್ತರಿಗಷ್ಟೇ ಇದ್ದ ಆಹ್ವಾನದಲ್ಲಿ ನಟ ಚಿರಂಜೀವಿ ಅವರ ಅಳಿಯ ಚೈತನ್ಯ ಜಿವಿ ಗೈರಾಗಿದ್ದು, ನಿಹಾರಿಕಾ ಡಿವೋರ್ಸ್ ವಿಚಾರಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ

ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2016ರಲ್ಲಿ ಬಳಿಕ 2017ರಲ್ಲಿ ಇಬ್ಬರು ಮಿಸ್ಟರ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. 

ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದಾರೆ. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ಅಂತರಿಕ್ಷಂ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು. ಅಲ್ಲಿಂದ ಎಂಗೇಜ್‌ಮೆಂಟ್ ಆಗುವವರೆಗೂ ಪ್ರೀತಿಯ ಬಗ್ಗೆ ಎಲ್ಲೂ ಈ ಜೋಡಿ ರಿಯಾಕ್ಟ್ ಮಾಡಿರಲಿಲ್ಲ. ಇದೀಗ ವರುಣ್-ಲಾವಣ್ಯ ಅವರ ಎಂಗೇಜ್‌ಮೆಂಟ್‌ನಲ್ಲಿ ನಿಹಾರಿಕಾ ಪತಿ ಚೈತನ್ಯ ಗೈರಾಗಿರೋದು ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

ಈ ದಿನಕ್ಕಾಗಿ ಕಾಯುತ್ತಿದ್ದೆ, ನನ್ನ ಕುಟುಂಬಕ್ಕೆ ಸ್ವಾಗತ ಅಂತಾ ಸಹೋದರ ವರುಣ್ ಮತ್ತು ಭಾವಿ ಅತ್ತಿಗೆ ಜೊತೆ ಖುಷಿಯಿಂದ ಪೋಸ್ ಕೊಟ್ಟಿರುವ ಫೋಟೋವನ್ನ ನಟಿ ನಿಹಾರಿಕಾ ಪೋಸ್ಟ್ವ ಮಾಡಿದ್ದಾರೆ. ಈ ಫೋಟೋ ಅಪ್‌ಲೋಡ್ ಮಾಡ್ತಿದ್ದಂತೆ ಚೈತನ್ಯ ಎಲ್ಲಿ ಎಂದು ನಟಿ ಕಾಮೆಂಟ್ಸ್‌ಗಳ ಮೂಲಕ ಫ್ಯಾನ್ಸ್ ಪ್ರಶ್ನೆ ಮಾಡಿದ್ದಾರೆ.

ವರುಣ್ ನಿಶ್ಚಿತಾರ್ಥದ ಸಂಭ್ರಮದಲ್ಲಿ ಮಿಸ್ಸಿಂಗ್ ಆಗಿರೋದು ನಿಹಾರಿಕಾ ಜೊತೆಗಿನ ಡಿವೋರ್ಸ್ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಮೂಲಗಳ ಪ್ರಕಾರ, ನಿಹಾರಿಕಾ- ಚೈತನ್ಯ ಡಿವೋರ್ಸ್ ಪಡೆದಿರುವುದು ನಿಜ. ಹಾಗಾಗಿ ಇದೀಗ ನಿಹಾರಿಕಾ, ಆಕ್ಟಿಂಗ್-ನಿರ್ಮಾಣ ಅಂತಾ ಬ್ಯುಸಿಯಾಗಿದ್ದಾರೆ. ಮೆಗಾಸ್ಟಾರ್ ಕುಟುಂಬದಲ್ಲಿ ಮಕ್ಕಳಾದ ಶ್ರೀಜಾ, ನಿಹಾರಿಕಾ ಡಿವೋರ್ಸ್ ವಿಚಾರ ಸದ್ಯ ಟಾಲಿವುಡ್ ಹಾಟ್ ಟಾಪಿಕ್ ಆಗಿದೆ.