ದೇಶದಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಪ್ರಕರಣ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 21,880 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. 60 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇಲ್ಲಿಯವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,38,47,065 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,25,930 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಈ ವರೆಗೆ 4,31,71,653 ಮಂದಿ ಗುಣಮುಖರಾಗಿದ್ದು, ಸದ್ಯ 1,49,482 ಸಕ್ರಿಯ ಪ್ರಕರಣಗಳಿವೆ.