ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ


ಅಂಕೋಲಾ : ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ತಾಲೂಕು ಘಟಕದ ವತಿಯಿಂದ 2022-23 ನೇ ಸಾಲಿನಲ್ಲಿ ಸಾಧನೆ ಮಾಡಿದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದಾರೆ.
ಈ ಕುರಿತು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ತಾಲೂಕು ಘಟಕದ ಅಧ್ಯಕ್ಷ ಡಿ.ಜಿ.ನಾಯ್ಕ ಅವರ ಅಂಬಾರಕೊಡ್ಲದ ಮನೆಯಂಗಳದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡರು. ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯ ತಲಾ 5 ವಿದ್ಯಾರ್ಥಿಗಳಿಗೆ ಪುರಸ್ಕರಿಸಲು ತೀರ್ಮಾನಿಸಿದರು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರಕಾರ್ಡ್, ಫೋಟೋ, ಮೊಬೈಲ್ ನಂಬರ್ ನೀಡಬೇಕಿದ್ದು, ಜೂನ್ 21 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ವಾಟ್ಸಾಪ್ ಮೂಲಕ ಅಧ್ಯಕ್ಷರಾದ ಡಿ.ಜಿ.ನಾಯ್ಕ (9482110290) ಹಾಗೂ ಪ್ರಧಾನ ಕಾರ್ಯದರ್ಶಿ ನಾಗರಾಜ ಮಂಜಗುಣಿ (9844384013) ಹಾಗೂ ಅಂಚೆ ಮೂಲಕ ಕಳಿಸುವವರು ಆಮಂತ್ರಣ ಗ್ರಾಫಿಕ್ಸ್ ಕೆ.ಸಿ ರಸ್ತೆ ಅಂಕೋಲಾ ಕಳಿಸಲು ತಿಳಿಸಲಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷರಾದ ಮಾದೇವ ಎಂ. ನಾಯ್ಕ, ಉಪಾಧ್ಯಕ್ಷರಾದ ಉಮೇಶ ಎನ್. ನಾಯ್ಕ, ಸಂಜಯ ಆರ್. ನಾಯ್ಕ, ರಮೇಶ ಎಸ್. ನಾಯ್ಕ, ಯುವ ಘಟಕದ ಅಧ್ಯಕ್ಷ ಮಂಜುನಾಥ ಕೆ. ನಾಯ್ಕ, ಮಹಿಳಾ ಅಧ್ಯಕ್ಷೆ ಲೀಲಾವತಿ ಬಿ. ನಾಯ್ಕ, ಖಜಾಂಚಿ ಶ್ರೀಪಾದ ಟಿ. ನಾಯ್ಕ, ಸಹ ಕಾರ್ಯದರ್ಶಿ ವಸಂತ ವಿ. ನಾಯ್ಕ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕೊಂಡಳ್ಳಿ ಉಪಸ್ಥಿತರಿದ್ದರು.