ನವದೆಹಲಿ: ಚಿನ್ನದ ಹುಡುಗ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದ್ದಾರೆ. ಇದೀಗ ಅಮೇರಿಕಾದ ಒರೆಗಾನ್ ರಾಜ್ಯದ ಯುಜಿನ್ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಸ್ನ ಪುರುಷರ ಜಾವಲಿನ್ ಥ್ರೋ ಅರ್ಹತಾ ಸುತ್ತಿನ ಮೊದಲ ಎಸೆತದಲ್ಲೇ 88.39 ಮೀಟರ್ ಜಾವಲಿನ್ ಥ್ರೋ ಮಾಡುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಅರ್ಹತಾ ಸುತ್ತಿನ ಎ ಗುಂಪಿನಲಿದ್ದ ನೀರಜ್, ಭಾನುವಾರ ಬೆಳಗ್ಗೆ ನಡೆಯಲಿರುವ ಮಹತ್ವದ ಫೈನಲ್ ಸ್ಪರ್ಧೆಯಲ್ಲಿ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.
ವಿಶ್ವ ಚಾಂಪಿಯನ್ಸ್ ಫೈನಲ್‌ಗೆ ಅರ್ಹತೆ ಪಡೆಯಲು 83.50 ಮೀಟರ್ ಅರ್ಹತಾ ಗುರಿಯನ್ನು ನಿಗದಿ ಮಾಡಲಾಗಿತ್ತು. ಆದರೆ, ನೀರಜ್ 88.39 ಮೀಟರ್ ಎಸೆಯುವ ಮೂಲಕ ಮೊದಲ ಯತ್ನದಲ್ಲೇ ಯಶಸ್ಸು ಸಾಧಿಸಿದರು. ಗ್ರೆನಾಡದ ಅಂಡರ್ಸನ್ ಪೀಟರ್ಸ್ 89.91 ಮೀಟರ್ ಎಸೆಯುವ ಮೂಲಕ ಎಲ್ಲರ ಗಮನ ಸೆಳೆದು ಫೈನಲ್‌ಗೆ ಲಗ್ಗೆ ಇಟ್ಟರು.