ಕೊಪ್ಪಳದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಮೂವರು ದುರ್ಮರಣ

ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇತ್ತೀಚೆಗೆ ಅಷ್ಟೇ ಕುಷ್ಟಗಿ ಸಮೀಪ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿದೆ. ಕಂಟೈನರ್​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43) ಮೃತ ದುರ್ವೈವಿಗಳು.