ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಸೂಚನೆ ನೀಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 13) ಜನಪ್ರತಿನಿಧಿಗಳ ಸಮನ್ಸ್ ನೀಡಿದೆ.