ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ.ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪಕರು ಹಾಗೂ 14 ನೇ ಬ್ಲಾಕ್ ನಿವಾಸಿಯಾಗಿರುವ ಸುಹಾಸ್ ರಾಮಚಂದ್ರ ನಾಯಕ್ ಅವರು ಬುಧವಾರ ನಸುಕಿನ ವೇಳೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ 63 ವರ್ಷ ವಯಸ್ಸಾಗಿತ್ತು.
ಸರಳ, ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಸುಹಾಸ್ ರಾಮಚಂದ್ರ ನಾಯಕ್ ಅವರು ಶ್ರೀ.ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪಕರಾಗಿ ಅನುಪಮ ಸೇವೆಯನ್ನು ಸಲ್ಲಿಸುತ್ತಿದ್ದರು. ಮೃತರು ಪತ್ನಿ, ನಾಲ್ವರು ಗಂಡು ಮಕ್ಕಳು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.