ಹಳಿಯಾಳ : : ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿರುವುದಕ್ಕೆ ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುನೀಲ್ ಹೆಗಡೆಯವರು ಹರ್ಷ ವ್ಯಕ್ತಪಡಿಸಿದ್ದಾರೆ.
ತುಳಸಿ ಗೌಡ ಅವರು ಅಪ್ಪಟ ಪರಿಸರ ಮಾತೆ, ಅವರ ನಿಸ್ವಾರ್ಥ ಸೇವೆಗೆ ಒಲಿದ ಗೌರವ ಇದಾಗಿದ್ದು, ಇದು ಜಿಲ್ಲೆಗೆ ಸಂದ ಗೌರವ ಎಂದು ಸುನೀಲ್ ಹೆಗಡೆಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.



