ರಾಜಧಾನಿಯಲ್ಲಿದೆ 198 ಪ್ರವಾಹ ಪೀಡಿತ ಪ್ರದೇಶಗಳು, ಬಿಬಿಎಂಪಿ ವರದಿ

ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರಿನ ಪ್ರಾದೇಶಿಕ ಹವಾಮಾನ ಕೇಂದ್ರವು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಮುನ್ಸೂಚನೆ ನೀಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ಮುಂಗಾರು ಪರಿಹಾರ ಕ್ರಮಗಳನ್ನು ಪರಿಶೀಲನೆ ನಡೆಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪೌರಾಡಳಿತ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ವಿವಿಧ ಮುಂಗಾರು ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲಾಗಿದೆ.

ಬೆಂಗಳೂರಿನಲ್ಲಿ ಅತ್ಯಂತ ಬೇಗ ಪ್ರವಾಹಕ್ಕೆ ಉಂಟಾಗಬಹುದಾದ 198 ಪ್ರದೇಶಗಳನ್ನು ನಾಗರಿಕ ಪ್ರಾಧಿಕಾರ ಗುರುತಿಸಿದೆ. ಬಿಬಿಎಂಪಿ 118 ಸ್ಥಳಗಳಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಂಡಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಬೆಂಗಳೂರಿನ ಉಳಿದ 80 ಪ್ರವಾಹ ಪೀಡಿತ ಸ್ಥಳಗಳಲ್ಲಿ ತಾತ್ಕಾಲಿಕ ಪರಿಹಾರ ಕಾರ್ಯಗಳನ್ನು ನಡೆಸಲಾಗಿದೆ. ಈ ಪ್ರದೇಶಗಳಲ್ಲಿ ಮಳೆಯಿಂದ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ರಾಜಧಾನಿಯಲ್ಲಿ ಗುರುವಾರ (ಜೂನ್ 15) ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೇ, ವಾರವಿಡೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯಲ್ಲಿ ತಿಳಿಸಿದೆ.

ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಡೀ ದಿನ ಮೋಡ ಕವಿ ವಾತಾವರಣ ಇರಲಿದೆ ಎಂದು ಬೆಂಗಳೂರಿನ ಪ್ರಾದೇಶಿಕ ಹವಾಮಾನ ಕೇಂದ್ರವು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಮುನ್ಸೂಚನೆ ನೀಡಿದೆ.

ಗುರುವಾರದಂದು ಬೆಂಗಳೂರಿನ ಗರಿಷ್ಠ ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ  22 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

ಅಂಡರ್ಪಾಸ್ಗಳಲ್ಲಿ ಸಿಸಿಟಿವಿ, ವಿದ್ಯುತ್ ದೀಪಗಳು ಮತ್ತು ಮೀಟರ್ ಗೇಜ್ಗಳನ್ನು ಅಳವಡಿಸಿ ಮಳೆನೀರಿನ ಪ್ರಮಾಣವನ್ನು ಮೇಲ್ವಿಚಾರಣೆ ಮಾಡಲು ತಕ್ಷಣದ ಕ್ರಮಗಳನ್ನು ಪ್ರಾರಂಭಿಸಲು ಪೌರಕಾರ್ಮಿಕರಿಗೆ ಸೂಚಿಸಲಾಗಿದೆ.