ಸಿಇಟಿ ಟಾಪ್ಪರ್ಸ್ ಪಟ್ಟಿ; ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಪ್ರಥಮ

2023-24ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಕಳೆದ ತಿಂಗಳು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ, ಸಿಇಟಿ ಫಲಿತಾಂಶ (KCET Results 2023) ಇಂದು(ಜೂನ್ 15) ಪ್ರಕಟವಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ ನಟರಾಜ್ ಕುಮಾರ್ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರು ಇಂದು ಬೆಳಗ್ಗೆ 9.30ಕ್ಕೆ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವಿವಿಧ ಕೋರ್ಸ್​ಗಳಲ್ಲಿನ ಟಾಪ್ಪರ್ಸ್ ಪಟ್ಟಿಯ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಪ್ರಥಮ ಸ್ಥಾನ

  • ವಿಘ್ನೇಶ್​ ಪ್ರಥಮ ಸ್ಥಾನ (97.8%)
  • ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ (97.5%)
  • ಸಮೃದ್ಧ್​ ಶೆಟ್ಟಿ ತೃತೀಯ ಸ್ಥಾನ (97.1 %)
  • ಎಸ್.ಸುಮೇಧ್​ಗೆ 4ನೇ ಸ್ಥಾನ
  • ಮಾಧವ ಸೂರ್ಯಗೆ 5ನೇ ಸ್ಥಾನ

ಕೃಷಿ ವಿಭಾಗದಲ್ಲಿ ಬೈರೇಶ್ ಎಸ್.ಎಚ್ ಅವರಿಗೆ ಪ್ರಥಮ ಸ್ಥಾನ

ಕೃಷಿ ವಿಭಾಗದಲ್ಲಿ ಬೈರೇಶ್ ಎಸ್.ಎಚ್ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ಎಕ್ಸ್​ಪರ್ಟ್ ಯುನಿವರ್ಸಿಟಿ ಕಾಲೇಜ್ ವಿಧ್ಯಾರ್ಥಿಯಾದ ಬೈರೇಶ್, ಕ್ವಾಲಿಫಿಕೇಷನ್​ನಲ್ಲಿ 99.75 ಅಂಕ ಪಡೆದಿದ್ದು, ಸಿಇಟಿಯಲ್ಲಿ 93.75 ಅಂಕ ಪಡೆದು ಮೊದಲ ರ‍್ಯಾಂಕ್ ಪಡೆದಿದ್ದಾರೆ.

ವೆಟನರಿ ಸೈನ್ಸ್ ವಿಭಾಗದಲ್ಲಿ ಮಾಳವಿಕ ಕಾಪೂರ್​ಗೆ ಮೊದಲ ರ‍್ಯಾಂಕ್

ವೆಟನರಿ ಸೈನ್ಸ್ ವಿಭಾಗದಲ್ಲಿ ಮಾಳವಿಕ ಕಾಪೂರ್​ ಮೊದಲ ರ‍್ಯಾಂಕ್ ಪಡೆದಿದ್ದು, ಸಿಇಟಿಯಲ್ಲಿ ಒಟ್ಟು 97.222 ಅಂಕ ಪಡೆದಿದ್ದಾರೆ. ಇವರು ಚಾಮರಾಜಪೇಟೆಯ ಮಹೇಶ್ ಪಿಯು ಕಲೇಜಿನ ವಿಧ್ಯಾರ್ಥಿಯಾಗಿದ್ದಾರೆ.

ಬೆಂಗಳೂರಿನ ಶ್ರೀ ಕುಮಾರನ್ ಚಿಲ್ಡ್ರನ್ಸ್ ಹೋಮ್ ಕಾಂಪೋಸಿಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಆರ್, ಬಿ ಫಾರ್ಮಾದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಮಹೇಶ್ ಪಿಯು ಕಾಲೇಜಿನ ಮಾಳವಿಕಾ ಕಪೂರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ನಾರಾಯಣ್ ಇ ಟೆಕ್ನೋ ಶಾಲೆಯ ಮಾಧವ್ ಸೂರ್ಯ ತಾಡೆಪಲ್ಲಿ ತೃತೀಯದಲ್ಲಿದ್ದಾರೆ.

ಮಂಗಳೂರಿನ ಎಕ್ಸ್‌ಪರ್ಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಬಿಎಸ್‌ಸಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ರಾಯಚೂರಿನ ಪ್ರಮಾಣ ಪಿಯು ಕಾಲೇಜಿನ ಅನಯಾರಾಗ್ ರಂಜನ್ ದ್ವಿತೀಯ ರ‍್ಯಾಂಕ್ ಗಳಿಸಿದ್ದಾರೆ. ರಾಜಸ್ಥಾನ ರಾಜ್ಯದ ಲೇಡಿ ಅನ್ಸೂಯಾ ಸಿಂಘಾನಿ ಅವರ ಅಕಾಡೆಮಿ ಆಫ್ ಎಜುಕೇಶನ್‌ನ ಕಾರ್ತಿಕ್ ಮನೋಹರ್ ಸಿಂಹಸನ್ ಮೂರನೇ ರ‍್ಯಾಂಕ್ ಗಳಿಸಿದ್ದಾರೆ.

ಬೆಂಗಳೂರಿನ ಶ್ರೀ ಕುಮಾರನ್ಸ್ ಕಾಲೇಜಿನ ಪ್ರತೀಕ್ಷಾ ಆರ್ ಬಿಎನ್‌ವೈಎಸ್‌ನಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಭೈರೇಶ್ ಎಸ್.ಎಚ್ ದ್ವಿತೀಯ, ಹುಬ್ಬಳ್ಳಿಯ ಬೇಸ್ ಪಿಯು ಕಾಲೇಜಿನ ಸೃಜನ್ ಎಂ.ಎಚ್ ತೃತೀಯ ರ‍್ಯಾಂಕ್ ಗಳಿಸಿದ್ದಾರೆ.