ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ ಸಿಎಂ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಿಎಂ ಸಿದ್ದರಾಮಯ್ಯ ಸಮಯಾವಕಾಶ ಕೇಳಿದ್ದಾರೆ. ಜೂನ್ 21ರಂದು ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಜೂನ್ 21ರಂದು ದೆಹಲಿಗೆ ತೆರಳಲಿರುವ ಸಿಎಂ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ಸಿಎಂ ನಿರ್ಧರಿಸಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ, ಅನ್ನಭಾಗ್ಯ ಅಕ್ಕಿ ಸೇರಿದಂತೆ  ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಗಳಿವೆ.