ಶಾಸಕರಾದ ಆರ್.ವಿ.ದೇಶಪಾಂಡೆಯವರು ಇಂದು ಹಳಿಯಾಳ ಪಟ್ಟಣಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 3 ಗಂಟೆಗೆ ಹಳಿಯಾಳ ಪಟ್ಟಣದಲ್ಲಿರುವ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ಕಾಳಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಹಳಿಯಾಳ ಪಟ್ಟಣದಲ್ಲಿರುವ ಶಾಸಕರ ಕಾರ್ಯಾಲಯವು ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.