ಮಂಗಳೂರು: ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಸದ್ಯ ಈ ಕುರಿತಂತೆ ಕ್ರಮಕೈಗೊಂಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು ಸ್ಥಾಪಿಸುವ ಕುರಿತು ಆದೇಶ ನೀಡಿದ್ದಾರೆ. ಕೋಮು ಸೌರ್ಹಾದತೆ ಕಾಪಾಡುವ ದೃಷ್ಟಿಯಿಂದ ಹಾಗೂ ಅನೈತಿಕ ಪೊಲೀಸ್ಗಿರಿ ಪ್ರಕರಣಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ರಚನೆ ಮಾಡಲು ಉದ್ದೇಶಿಸಿರುವ ತಂಡದ ಸ್ಥಾಪನೆ ಕುರಿತು ಆದೇಶ ನೀಡಿದ್ದಾರೆ.
ನಗರದಲ್ಲಿ ನಡೆಯಬಹುದಾದ ನೈತಿಕ ಪೊಲೀಸ್ಗಿರಿ ಸಮಸ್ಯೆಯನ್ನು ನಿಭಾಯಿಸುವುದು.
ನಗರದಲ್ಲಿ ಈ ಹಿಂದೆ ವರದಿಯಾಗಿರುವ ಕೋವು ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು ಸೇರಿದಂತೆ ನೈತಿಕ ಪೊಲೀಸ್ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋ-ವಧೆ ಮುಂತಾದ ಪ್ರಕರಣಗಳನ್ನು ಪರಿಶೀಲಿಸಿ ಅವುಗಳಲ್ಲಿನ ಆರೋಪಿತರುಗಳ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾವಹಿಸಿ ಅವರುಗಳ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದರ ಬಗ್ಗೆ ಕರ್ತವ್ಯ ನಿರ್ವಹಿಸುವುದು.