ಕೋಚಿಂಗ್​ ಸೆಂಟರ್​ನಲ್ಲಿ ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು

ದೆಹಲಿಯ ಮುಖರ್ಜಿ ನಗರದಲ್ಲಿರುವ ಕೋಚಿಂಗ್​ ಸೆಂಟರ್​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಿಟಕಿ ಮೂಲಕ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, 11 ವಾಹನಗಳು ಸ್ಥಳಕ್ಕೆ ಆಗಮಿಸಿತ್ತು. ಈ ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಕೋಚಿಂಗ್ ಸೆಂಟರ್‌ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿತ್ತು.

ಬೆಂಕಿ ಅವಘಡ ಸಂಭವಿಸಿದ ಬಳಿಕ ಕೋಚಿಂಗ್ ಸೆಂಟರ್‌ನಲ್ಲಿದ್ದ ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಕೆಳಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.