ಹೊನ್ನಾವರ: ವಾಜಪೇಯಿ ನಗರ ವಸತಿ ಯೋಜನೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಪ.ಪಂ ಸಭಾಭವನದಲ್ಲಿ ನಡೆಯಿತು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಫಲಾನುಭವಿಗಳು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ. ಪ.ಪಂ ಅಭಿವೃದ್ಧಿಗೆ ಶಾಸಕ ದಿನಕರ ಶೆಟ್ಟಿಯವರ ಜೊತೆ ಕೈಜೋಡಿಸುವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಇಂದು ಎಲ್ಲವು ಆನ್ಲೈನ್ ಆಗಿದೆ. ಮನೆ ನಿರ್ಮಾಣದ ಕಾಮಗಾರಿ ಆರಂಭದಿಂದ ಮುಕ್ತಾಯದವರೆಗೂ ಜಿಪಿಎಸ್ ಅವಶ್ಯಕತೆ ಇರುತ್ತದೆ. ಯಾವುದೇ ಕಾರಣಕ್ಕೂ ಕಾಮಗಾರಿಗೆ ಹಣ ವಿನಿಯೋಗಿಸಿ ನಂತರ ಬಿಲ್ ಆಗಬೇಕೆಂದು ಕೇಳಬೇಡಿ. ಆದೇಶವಿರುವ ಪ್ರತಿ ಹಂತದಲ್ಲೂ ಅಧಿಕಾರಿಗಳ ಸಂಪರ್ಕದಲ್ಲಿದ್ದು ಗಮನಕ್ಕೆ ತನ್ನಿರಿ ಎಂದರು.
ಕಾರ್ಯಕ್ರಮದಲ್ಲಿ ಪ.ಪಂ ಅಧ್ಯಕ್ಷ ಶಿವರಾಜ ಮೇಸ್ತ, ಉಪಾಧ್ಯಕ್ಷೆ ನಿಶಾ ಶೇಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.