ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಬೆಂಗಳೂರಿನಲ್ಲಿ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ

ಬೆಂಗಳೂರು: ನಗರದಲ್ಲಿ ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈ ರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. 80 ಠಾಣೆಗಳಲ್ಲಿ ಕ್ಯಾಮರಾ ದೃಶ್ಯಾವಳಿ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು. ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್​​​ನಲ್ಲಿ ಬಟನ್​​ ಒತ್ತಿದ್ರೆ ಪೊಲೀಸರಿಗೆ ಮಾಹಿತಿ ಬರುತ್ತೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ ಎಂದು ತಿಳಿಸಿದರು.