ತುಮಕೂರು: ಚರಂಡಿ ನೀರು ಹರಿದುಹೋಗುವ ವಿಚಾರಕ್ಕೆ 2 ಕುಟುಂಬದ ನಡುವೆ ಗಲಾಟೆ ನಡೆದಿದ್ದು ಗಲಾಟೆಯಲ್ಲಿ ಗಾಯಗೊಂಡಿದ್ದ ವಸಂತ್ಕುಮಾರ್(24) ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಚರಂಡಿ ನೀರು ಹರಿದು ಹೋಗುವ ವಿಚಾರಕ್ಕೆ ಶಿವಬಸವಯ್ಯ ಮತ್ತು ಬಸವಲಿಂಗಯ್ಯ ಕುಟುಂಬದ ನಡುವೆ ಮಾರಾಮಾರಿ ನಡೆದಿದೆ.
ಈ ವೇಳೆ ಬಸವಲಿಂಗಯ್ಯ ಕುಟುಂಬದವರು ಶಿವಬಸವಯ್ಯ ಕುಟುಂಬದ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಗಲಾಟೆ ವೇಳೆ ಗಾಯಗೊಂಡಿದ್ದ ಶಿವಬಸವಯ್ಯ ಪುತ್ರ ವಸಂತ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಸವಲಿಂಗಯ್ಯ, ಕುಮಾರ್, ವಿಜಯ್ ಸೇರಿ 8 ಜನರ ವಿರುದ್ಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.