ಹಾಸನ (ಜೂ.17) : ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ನಡೆದಿದೆ.
ಜೂ.15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಬಂದಿದ್ದ ಶರತ್. ಈ ವೇಳೆ ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿದ್ದ ಗ್ರಾಮದ ಯುವಕರ ಗುಂಪು. ಇದನ್ನು ನೋಡಿದ ಶರತ್ ಜಗಳ ಬಿಡಿಸಲು ಮುಂದಾಗಿದ್ದಾನೆ. ಆದರೆ ಯುವಕರ ಗುಂಪು ರೊಚ್ಚಿಗೆದ್ದು ಜಗಳ ಬಿಡಿಸಲು ಬಂದ ಶರತ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಮಿಥುನ್ ಲೋಹಿತ್ ನಟರಾಜು ಸಹಚರರು ಸೇರಿ ಮರಣಾಂತಿಕ ಹಲ್ಲೆ ನಡೆಸಿದ್ದಾರೆ.