ಬೆಳಗಾವಿ: ಕಾಕತಿ ಬಳಿ ಭೀಕರ ಸರಣಿ ಅಪಘಾತ, ಇಬ್ಬರು ಸಾವು, ಕಾಡಸಿದ್ದೇಶ್ವರ ಸ್ವಾಮೀಜಿ ಪಾರು..!

ಬೆಳಗಾವಿ(ಜೂ.17):  ಕಾರು, ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ‌ ಇಂದು(ಶನಿವಾರ) ನಡೆದಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಗಂಭೀರವಾದ ಗಾಯಗಳಾಗಿವೆ ಅಂತ ತಿಳಿದು ಬಂದಿದೆ. 

ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಗೆ ಬರುತ್ತಿದ್ದರು. ವಿಶ್ವ ಹಿಂದೂ ಪರಿಷತ್- ಭಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಗೊಂಡಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ಮುಪ್ಪಿನ ಕಾಡಸಿದ್ದೇಶ್ವರ ಮಠ ಇದೆ.