ಕೆಂಪೇಗೌಡ ಏರ್‌ಪೋರ್ಟ್ ಬಳಿ ಬಸ್ ಅಪಘಾತ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರು (ಜೂ.18) : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಸ್ ಅಪಘಾತಕ್ಕೀಡಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ. T1 T2 ನಡುವೆ ಸಂಚಾರ ಮಾಡುತ್ತಿದ್ದ ಶಟಲ್ ಸರ್ವಿಸ್ ಬಸ್.  ಟರ್ಮಿನಲ್- 2ರಲ್ಲಿನ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ನಡೆದಿರುವ ದುರ್ಘಟನೆ.

ಬಸ್‌ ಚಾಲಕನ ನಿರ್ಲಕ್ಷ್ಯತನದಿಂದ ಸಂಭವಿಸಿರುವ ಅಪಘಾತ.  ಅಪಘಾತಕ್ಕೆ ಬಸ್ಸಿನ ಮುಂಭಾಗ ಪೂರ್ಣ ಜಖಂ ಗೊಂಡಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಏರ್‌ಪೋರ್ಟ್ ಬಳಿಯಿರುವ ಆಸ್ಪತ್ರೆಗೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಕೆಐಎಬಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣ