ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕ ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹಮ್ಮದ್ ಯಾಸೀನ್ ಮೃತ ವ್ಯಕ್ತಿ. ಇತ ಬೆಂಗಳೂರಿನ ಶ್ಯಾಂಪುರ ನಿವಾಸಿಯಾಗಿದ್ದು, ವೀಕೆಂಡ್​ ಹಿನ್ನೆಲೆ ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ಬಂದಿದ್ದಾಗ​ ಈ ಅವಘಡ ಸಂಭವಿಸಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.