ತುಮಕೂರು: ಶ್ರೀ ಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಎಚ್.ಸಿ. ಪ್ರಸನ್ನ ಕುಮಾರ (63) ಶನಿವಾರ ಮಧ್ಯಾಹ್ನ ವಿಧಿವಶರಾದರು. ಈ ಹಿನ್ನೆಲೆಯಲ್ಲಿ ದೇವಾಲಯದ ಪೂಜಾ ಕೈಂಕರ್ಯಗಳು ಹಾಗೂ ದೇವರ ದರ್ಶನವನ್ನು ಭಾನುವಾರ ಮಧ್ಯಾಹ್ನ 1 ಗಂಟೆವರೆಗೆ ನಿರ್ಬಂಧಿಸಲಾಗಿದೆ.
ದೇವಾಲಯದ ಸಂಸ್ಥಾಪಕಿ ಕಮಲಮ್ಮ ಅವರ ಸಾಕು ಮಗನಾಗಿದ್ದ ಪ್ರಸನ್ನ ಕುಮಾರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದರು. ಭಾನುವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕೊರಟಗೆರೆ ತಾಲೂಕಿನ ಅರ್ಚಕರ ಸಂಘ, ಬ್ರಾಹ್ಮಣರ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ್ರಸನ್ನಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿವೆ.