ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥಮುತ್ತೂರು ಮಠದ ಬಳಿ ನಡೆದಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್(38), ಬಾಲಾಜಿ(36) ಮೃತ ದುರ್ದೈವಿಗಳು. ಶನಿವಾರ ಪ್ರವಾಸಕ್ಕೆ ಬಂದಿದ್ದ ಇಬ್ಬರು ಹೋಮ್​ ಸ್ಟೇನಲ್ಲಿ ತಂಗಿದ್ದರು. ತುಂಗಾ ನದಿಗೆ ಈಜಲು ಹೋಗಿದ್ದಾಗ ಮುಳುಗಿ ಮೃತಪಟ್ಟಿದ್ದಾರೆ.