ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಶುರುವಾಗಿರುವ ಅಕ್ಕಿ ಯುದ್ಧ ತಾರಕ್ಕೇರುವ ಲಕ್ಷಣ ದಟ್ಟವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ, ಅನ್ನಭಾಗ್ಯ ಯೋಜನೆಗೆ ಅಡ್ಡಿ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರುತ್ತಿದ್ದಾರೆ. ಇತ್ತ ಬಿಜೆಪಿ ನಾಯಕರು ಸಹ ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡುತ್ತಿದ್ದಾರೆ. ಇನ್ನು ಇದೇ ಅಕ್ಕಿ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ. ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪ್ರಧಾನಿಯನ್ನ ಎಳೆದು ತರುಲು ಹರಸಾಹಸ ಮಾಡುತ್ತಿದೆ. ರಾಜ್ಯದ ಸಿಎಂ ಅಕ್ಕಿಗೆ ಸಂಬಂಧಿಸಿದಂತೆ ಕೇಂದ್ರದ ಬಳಿ ಬೇಡಿಕೆ ಇಟ್ಟಿಲ್ಲ. ಸೌಜನ್ಯಕ್ಕಾದರೂ ಪ್ರಧಾನಿ, ಕೇಂದ್ರ ಆಹಾರ ಸಚಿವರ ಬಳಿ ಬೇಡಿಕೆ ಇಟ್ಟಿಲ್ಲ. ರಾಜ್ಯ ಸರ್ಕಾರ ಬಡವರಿಗೆ ನೆರವಾಗಬೇಕೇ ಹೊರತು ರಾಜಕಾರಣವಲ್ಲ ಎಂದು ಕಿರಿಕಾಡಿದ್ದಾರೆ.
ತನ್ನ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ, ಪ್ರಧಾನಿ ಮೋದಿಯವರನ್ನು ಎಳೆದು ತರುಲು ಹರಸಾಹಸ ಮಾಡುತ್ತಿದೆ. ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ , ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ. ಅನಗತ್ಯವಾಗಿ ಕಾಂಗ್ರೆಸ್ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದೆ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರೇ ನೀವು ನೀಡಿರುವ ಹತ್ತು ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ. ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡಬಾರದು ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರಬಾರದು. ಬಡವರ ಆಹಾರದ ಅಗತ್ಯವನ್ನು ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.