ಕಳೆದ ತಿಂಗಳು ಹೆಸರಾಂತ ಧಾರಾವಾಹಿಯ ನಟಿಯೊಬ್ಬರು ಅದೇ ಧಾರಾವಾಹಿಯ ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ನಿರ್ಮಾಪಕ ಅಸಿತ್ ಮೋದಿ, ಆಪರೇಷನ್ ಹೆಡ್ ಸೊಹೈಲ್ ರಮಣಿ ಮತ್ತು ಕಾರ್ಯನಿರ್ವಾಹಕ ನಿರ್ಮಾಪಕ ಜತಿನ್ ಬಜಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 509ರ ಅಡಿಯಲ್ಲಿ ಎಫ್.ಐ.ಆರ್ (F.I.R) ದಾಖಲಿಸಿದ್ದಾರೆ.
ಸತತ ಹದಿನೈದು ವರ್ಷಗಳಿಂದ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ತಾರಕ್ ಮೆಹ್ತಾ ಕಾ ಉಲ್ಟಾ ಚಷ್ಮಾ’ ಧಾರಾವಾಹಿಯ ನಿರ್ಮಾಪಕ ಅಸಿತ್ ಕುಮಾರ್ ಮೋದಿ ಹಾಗೂ ಮತ್ತಿಬ್ಬರು ತಮಗೆ ಲೈಂಗಿಕ ಕಿರುಕುಳ ಹಾಗೂ ತಮ್ಮೊಂದಿಗೆ ದುರ್ವತನೆ ತೋರಿದ್ದಾರೆ ಎಂದು ನಟಿ ಆರೋಪಿಸಿದ್ದರು.
ಈ ಆರೋಪವನ್ನು ನಿರ್ಮಾಪಕಿ ಮೋದಿ ಅಲ್ಲಗಳೆದಿದ್ದು, ತಾವು ಯಾವತ್ತಿಗೂ ಯಾರೊಂದಿಗೆ ಆ ರೀತಿಯಲ್ಲಿ ವರ್ತನೆ ಮಾಡಿಲ್ಲವೆಂದು ಪ್ರತಿಕ್ರಿಯಿಸಿದ್ದಾರೆ. ತಮ್ಮ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ನಟಿ ಮುಂಬೈ ಪೊಲೀಸ್ ಹಾಗೂ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಆ ಪತ್ರದಲ್ಲಿ ನಿರ್ಮಾಪಕ ಅಸಿತ್ ಕುಮಾರ್ ಮೋದಿ, ಪ್ರಾಜೆಕ್ಟ್ ಹೆಡ್ ಸೋಹಾಲಿ ರೊಮಾನಿ ಹಾಗೂ ಕಾರ್ಯಕಾರಿ ನಿರ್ಮಾಪಕ ಜತಿನ್ ಬಜಾಜ್ ಹೆಸರನ್ನು ಉಲ್ಲೇಖಿಸಿದ್ದಾರೆ.