ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಿನ್ನೆಲೆಯಲ್ಲಿ ನಿನ್ನೆ(ಜೂನ್ 20) ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಸಿದ್ದರಾಮಯ್ಯನವರು ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ ಮಾಡಿಕೊಂಡು ಇಂದು(ಜೂನ್ 21) ಬೆಳಗ್ಗೆ ಆಸ್ಪತ್ರೆಗೆಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚೆನ್ನಾಗಿದ್ದಾರೆ, ಸಮಸ್ಯೆ ಏನು ಇಲ್ಲ ಎಂದು ಹೇಳಿ ಆಸ್ಪತ್ರೆಯಿಂದ ಹೊರಟರು.
ಇನ್ನು ಸಿದ್ದರಾಮಯ್ಯನವರ ಪತ್ನಿ ಪರ್ವತಿ ಅವರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆ ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ನಿನ್ನೆ (ಜೂನ್ 20) ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ MICUನಲ್ಲಿ ಪಾರ್ವತಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು MICUನಿಂದ ವಾರ್ಡ್ಗೆ ಶಿಫ್ಟ್ ಮಾಡುತ್ತೇವೆ ಎಂದು ತಿಳಿಸಿದರು.
ಇನ್ನು ಪುತ್ರ ಯತೀಂದ್ರ ಸಿದ್ದರಾಮಯ್ಯನವರು ಆಸ್ಪತ್ರೆ ಉಳಿದುಕೊಂಡು ತಾಯಿ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.