ವಿಜಯಪುರ (ಜೂ.21): ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿ ಐವರು ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿ ನಡೆದಿದೆ. ವಿಜಯಪುರ ಕಲಬುರಗಿ ಹೆದ್ದಾರಿ ಮೇಲೆ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಥಣಿಯಿಂದ ವಿಜಯಪುರ ಮಾರ್ಗವಾಗಿ ಗಾಣಗಾಪುರಕ್ಕೆ ಬಸ್ ಸಂಚರಿಸುತ್ತಿದ್ದಾಗ ಕಲಬುರಗಿಯಿಂದ ವಿಜಯಪುರದ ಕಡೆಗೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಚಾಲಕ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.