ಬೆಂಗಳೂರು: ನಾಳೆ ನಡೆಯಲಿರುವ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಸಿಎಂ ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ಸಭೆಯಲ್ಲಿ ಸಿಎಂ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ.
ಸೋಮವಾರ ರಾಷ್ಟ್ರದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕೇಂದ್ರ ಸಚಿವರನ್ನು ಭೇಟಿಯಾಗಿ ವಿವಿಧ ಯೋಜನೆಗಳ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ.